ಗಾಯಕರು: ಸಿ. ಅಶ್ವಥ್ & ರತ್ನಮಾಲಾ ಪ್ರಕಾಶ್
ಸಾಹಿತ್ಯ: ಎಚ್ ಎಸ್ ವಿ
ಸಂಗೀತ: Violin ಚಂದ್ರು
ಇಷ್ಟು ಕಾಲ ಒಟ್ಟಿಗಿದ್ದು ಎಷ್ಟು ಬೆರೆತರೂ
ಅರಿತೆವೇನು ನಾವು ನಮ್ಮ ಅಂತರಾಳವ
ಇಷ್ಟು ಕಾಲ ಒಟ್ಟಿಗಿದ್ದು ಎಷ್ಟು ಬೆರೆತರೂ
ಅರಿತೆವೇನು ನಾವು ನಮ್ಮ ಅಂತರಾಳವ
♫♫♫♫♫♫♫♫♫♫♫♫
ಕಡಲ ಮೇಲೆ ಸಾವಿರಾರು ಮೈಲಿ ಸಾಗಿಯೂ
ಕಡಲ ಮೇಲೆ ಸಾವಿರಾರು ಮೈಲಿ ಸಾಗಿಯೂ
ನೀರಿನಾಳ ತಿಳಿಯಿತೇನು ಹಾಯಿ ದೋಣಿಗೆ
ನೀರಿನಾಳ ತಿಳಿಯಿತೇನು ಹಾಯಿ ದೋಣಿಗೆ
ಇಷ್ಟು ಕಾಲ ಒಟ್ಟಿಗಿದ್ದು ಎಷ್ಟು ಬೆರೆತರೂ
ಅರಿತೆವೇನು ನಾವು ನಮ್ಮ ಅಂತರಾಳವ
♫♫♫♫♫♫♫♫♫♫♫♫
ಸದಾಕಾಲ ತಬ್ಬುವಂತೆ ಮೇಲೆ ಬಾಗಿಯೂ
ಸದಾಕಾಲ ತಬ್ಬುವಂತೆ ಮೇಲೆ ಬಾಗಿಯೂ
ಮಣ್ಣ ಮುತ್ತು ದೊರೆಯಿತೇನು ನೀಲಿಬಾನಿಗೆ
ಮಣ್ಣ ಮುತ್ತು ದೊರೆಯಿತೇನು ನೀಲಿಬಾನಿಗೆ
ಇಷ್ಟು ಕಾಲ ಒಟ್ಟಿಗಿದ್ದು ಎಷ್ಟು ಬೆರೆತರೂ
ಅರಿತೆವೇನು ನಾವು ನಮ್ಮ ಅಂತರಾಳವ
♫♫♫♫♫♫♫♫♫♫♫♫
ಸಾವಿರಾರು ಮುಖದ ಚೆಲುವ ಹಿಡಿದು ತೋರಿಯೂ
ಒಂದಾದರೂ ಉಳಿಯಿತೇ ಕನ್ನಡಿಯ ಪಾಲಿಗೆ
ಆ ಸಾವಿರಾರು ಮುಖದ ಚೆಲುವ ಹಿಡಿದು ತೋರಿಯೂ
ಒಂದಾದರೂ ಉಳಿಯಿತೇ ಕನ್ನಡಿಯ ಪಾಲಿಗೆ
ಇಷ್ಟು ಕಾಲ ಒಟ್ಟಿಗಿದ್ದು ಎಷ್ಟು ಬೆರೆತರೂ
ಅರಿತೆವೇನು ನಾವು ನಮ್ಮ ಅಂತರಾಳವ
ಇಷ್ಟು ಕಾಲ ಒಟ್ಟಿಗಿದ್ದು ಎಷ್ಟು ಬೆರೆತರೂ
ಅರಿತೆವೇನು ನಾವು ನಮ್ಮ ಅಂತರಾಳವ
ಅಂತರಾಳವ ಅಂತರಾಳವ
Istu kala ottigiddu Song Lyrics in Kannada
C Ashwath
Rathnamala Prakash