ಬಾ ಮಲ್ಲಿಗೆ ಬಾ ಮೆಲ್ಲಗೆ – Baa mallige baa mellage Lyrics in Kannada – C Ashwath

Lyrics: Channaveera Kanavi
Music: C Ashwath
Singers: Srivivas udupa, Indu
ಬಾ ಮಲ್ಲಿಗೆ, ಬಾ ಮೆಲ್ಲಗೆ ನನ್ನೆದೆ ಮೆಲ್ವಾಸಿಗೆ
ಇಳೆಗಿಳಿದಿದೆ ಬೆಳುದಿಂಗಳು ನಮ್ಮೊಲುಮೆಯ ಕರೆಗೆ
ಬಾ ಮಲ್ಲಿಗೆ ಬಾ ಮೆಲ್ಲಗೆ ನನ್ನೆದೆ ಮೆಲ್ವಾಸಿಗೆ
ಇಳೆಗಿಳಿದಿದೆ ಬೆಳುದಿಂಗಳು ನಮ್ಮೊಲುಮೆಯ ಕರೆಗೆ
♫♫♫♫♫♫♫♫♫♫♫♫♫♫
ಚೆಲುವಾಗಿದೆ ಬನವೆಲ್ಲವೂ ಗೆಲುವಾಗಿದೆ ಮನವು
ಉಸಿರುಸಿರಿಗು ತಂಪೆರಚಿದೆ ನಿನ್ನೆದೆ ಪರಿಮಳವು
ಚೆಲುವಾಗಿದೆ ಬನವೆಲ್ಲವೂ ಗೆಲುವಾಗಿದೆ ಮನವು
ಉಸಿರುಸಿರಿಗು ತಂಪೆರಚಿದೆ ನಿನ್ನೆದೆ ಪರಿಮಳವು
ತಿಂಗಳ ತನಿ ಬೆಳಕಲಿ ಮೈದೊಳೆದಿಹ ಮನದನ್ನೆ
ತಿಂಗಳ ತನಿ ಬೆಳಕಲಿ ಮೈದೊಳೆದಿಹ ಮನದನ್ನೆ
ಮಂಗಳವೀ ಮನೆಯಂಗಳ ಚೆಂಗಲವೆಯ ಚೆನ್ನೆ
ಬಾ ಮಲ್ಲಿಗೆ, ಬಾ ಮೆಲ್ಲಗೆ ನನ್ನೆದೆ ಮೆಲ್ವಾಸಿಗೆ
ಇಳೆಗಿಳಿದಿದೆ ಬೆಳುದಿಂಗಳು ನಮ್ಮೊಲುಮೆಯ ಕರೆಗೆ
♫♫♫♫♫♫♫♫♫♫♫♫♫♫
ಹಿತವಾಗಿದೆ ಮೆಲ್ಲಲರುಲಿ ಮಿತವಾಗಿದೆ ಮೌನ
ಜೊತೆಗೂಡುತ ಮಾತಾಡಿವೆ ಅರೆ ನಿದ್ರೆಯೊಳೇನ
ಹಿತವಾಗಿದೆ ಮೆಲ್ಲಲರುಲಿ ಮಿತವಾಗಿದೆ ಮೌನ
ಜೊತೆಗೂಡುತ ಮಾತಾಡಿವೆ ಅರೆ ನಿದ್ರೆಯೊಳೇನ
ಲೋಕದ ಮೈ ನೋವಿಗೆ ಶ್ರೀಗಂಧದ ತನಿಲೇಪ
ಲೋಕದ ಮೈ ನೋವಿಗೆ ಶ್ರೀಗಂಧದ ತನಿಲೇಪ
ಆಕಾಶದ ಗುಡಿಯಿಂದಲೇ ಹೊರಸೂಸಿದ ಧೂಪ
ಬಾ ಮಲ್ಲಿಗೆ, ಬಾ ಮೆಲ್ಲಗೆ ನನ್ನೆದೆ ಮೆಲ್ವಾಸಿಗೆ
ಇಳೆಗಿಳಿದಿದೆ ಬೆಳುದಿಂಗಳು ನಮ್ಮೊಲುಮೆಯ ಕರೆಗೆ
♫♫♫♫♫♫♫♫♫♫♫♫♫♫
ಒಳಿತೆಲ್ಲವೂ ಬೆಳಕಾಯಿತು ಬಾನ್ಗರೆಯಿತು ಜೇನು
ಆನಂದದ ಕಡಲಾಳದಿ ನಾವಾದೆವೆ ಮೀನು
ಒಳಿತೆಲ್ಲವೂ ಬೆಳಕಾಯಿತು ಬಾನ್ಗರೆಯಿತು ಜೇನು
ಆನಂದದ ಕಡಲಾಳದಿ ನಾವಾದೆವೆ ಮೀನು
ಎವೆಯಿಕ್ಕದೆ ಮಿನುಗುತ್ತಿದೆ ಚಿಕ್ಕೆಯ ಹನಿ ದೀಪ
ಎವೆಯಿಕ್ಕದೆ ಮಿನುಗುತ್ತಿದೆ ಚಿಕ್ಕೆಯ ಹನಿ ದೀಪ
ತಮ್ಮಷ್ಟಕ್ಕೆ ಧ್ಯಾನಿಸುತ್ತಿವೆ ಯಾವುದು ಸವಿನೆನಪ
ಬಾ ಮಲ್ಲಿಗೆ, ಬಾ ಮೆಲ್ಲಗೆ ನನ್ನೆದೆ ಮೆಲ್ವಾಸಿಗೆ
ಇಳೆಗಿಳಿದಿದೆ ಬೆಳುದಿಂಗಳು ನಮ್ಮೊಲುಮೆಯ ಕರೆಗೆ

Ba mallige ba mellage Lyrics
Ba mallige Lyrics
Ba mallige ba mellage Song Lyrics
Baa mallige baa mellage Song Lyrics in Kannada
C Ashwath Songs Lyrics

Leave a Reply

Your email address will not be published. Required fields are marked *