ಹೆಂಡತಿಯೊಬ್ಬಳು ಮನೆಯೊಳಗಿದ್ದರೆ – Hendathiyobbalu Maneyolagiddare Lyrics – K S Narasimhaswamy – Mysore Ananthaswamy


Lyrics : K S Narasimhaswamy

Music/Singer: Raju Ananthaswamy


ಹೆಂಡತಿಯೊಬ್ಬಳು

ಹೆಂಡತಿಯೊಬ್ಬಳು ಮನೆಯೊಳಗಿದ್ದರೆ
ನನಗದೆ ಕೋಟಿ ರುಪಾಯಿ

ಹೆಂಡತಿಯೊಬ್ಬಳು ಹತ್ತಿರವಿದ್ದರೆ
ನಾನೂ ಒಬ್ಬ ಸಿಪಾಯಿ

ಹೆಂಡತಿಯೊಬ್ಬಳು ಮನೆಯೊಳಗಿದ್ದರೆ
ನನಗದೆ ಕೋಟಿ ರುಪಾಯಿ

ಹೆಂಡತಿಯೊಬ್ಬಳು ಹತ್ತಿರವಿದ್ದರೆ
ನಾನೂ ಒಬ್ಬ ಸಿಪಾಯಿ

ಹೆಂಡತಿಯೊಬ್ಬಳು

 

ಹೆಂಡತಿಯೊಬ್ಬಳು ಮನೆಯೊಳಗಿದ್ದರೆ
ಹುಣ್ಣಿಮೆ ಹೋಳಿಗೆ ದೀಪ

ಹೆಂಡತಿ ತವರಿಗೆ ಹೊರಡುವೆನೆಂದರೆ
ನನಗಿಲ್ಲದ ಕೋಪ

ಕೈ ಹಿಡಿದವಳು ಕೈ ಬಿಡದವಳು ಮಾಡಿದಡಿಗೆಯೇ
ಚಂದ

ನಾಗರ ಕುಚ್ಚಿನ ನಿಡುಜಡೆಯವಳು
ಈಕೆ ಬಂದುದೆಲ್ಲಿಂದ

ಹೆಂಡತಿಯೊಬ್ಬಳು

 

ಕಬ್ಬಿಗನೂರಿನ ಅರಮನೆಯಿಂದ ಕನಸೇ
ಇರಬೇಕು

ಅಲ್ಲಿಯ ದೊರೆತನ ಸಿಗುವಂತಿದ್ದರೆ
ನನಗೇ ಸಿಗಬೇಕು

ತಾರೆಯ ಬೆಳಕಿನ ತುಂಬಿದ ಸಭೆಯಲಿ
ಸುಂದರಿ ಮೆರೆದಾಳು

ನನ್ನೊಡನವಳು ಸಿಂಹಾಸನದಲಿ ಮೆಲ್ಲನೆ
ನಕ್ಕಾಳು

ಹೆಂಡತಿಯೊಬ್ಬಳು

 

ಚಂದಿರನೂರಿನ ಅರಮನೆಯಿಂದ ಬಂದವರೀಗೆಲ್ಲಿ

ಬೆಳ್ಳಿಯ ಕೋಟೆಯ ಬಾಗಿಲಿನಿಂದ
ಬಂದವರೀಗೆಲ್ಲಿ

ಹೆಂಡತಿಯೊಂದಿಗೆ ಬಡತನ ದೊರೆತನ

ಹೆಂಡತಿಯೊಂದಿಗೆ ಬಡತನ ದೊರೆತನ
ಏನೂ ಭಯವಿಲ್ಲ

ಹೆಂಡತಿಯೊಲುಮೆಯ ಭಾಗ್ಯವನರಿಯದ
ಗಂಡಿಗೆ ಜಯವಿಲ್ಲ

 

ಭರಣಿಯ ತೆರೆದರೆ ಅರಿಶಿನ ಕುಂಕುಮ
ಅವಳದು ಈ ಸಂಪತ್ತು

ತುಟಿಗಳ ತೆರೆದರೆ ತುಳುಕುವುದಿ೦ಪಿನ
ಎರಡೋ ಮೂರೋ ಮುತ್ತು

 

ಹೆಂಡತಿಯೊಬ್ಬಳು ಮನೆಯೊಳಗಿದ್ದರೆ
ನನಗದೆ ಕೋಟಿ ರುಪಾಯಿ

ಹೆಂಡತಿಯೊಬ್ಬಳು ಹತ್ತಿರವಿದ್ದರೆ
ನಾನೂ ಒಬ್ಬ ಸಿಪಾಯಿ

ಹೆಂಡತಿಯೊಬ್ಬಳು



Hendatiyobbalu Mane olagiddare Lyrics 

Hendathiyobbalu Lyrics  

Leave a Reply

Your email address will not be published. Required fields are marked *