80 PC, 20 PSI ಹುದ್ದೆಗಳ ನೇಮಕಾತಿಗೆ ಪೊಲೀಸ್‌ ಇಲಾಖೆ ಅಧಿಸೂಚನೆ: ಅರ್ಜಿ ಆಹ್ವಾನ


ಕ್ರೀಡಾಕೋಟಾದಡಿ ಪೊಲೀಸ್‌ ಸಬ್‌-ಇನ್ಸ್‌ಪೆಕ್ಟರ್ ಮತ್ತು ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳ ಭರ್ತಿಗೆ ಪೊಲೀಸ್ ಇಲಾಖೆಯು ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ತಿಳಿದು ಅರ್ಜಿ ಸಲ್ಲಿಸಬಹುದು.



ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಪ್ರಶಂಸನೀಯ ಕ್ರೀಡಾಪಟುಗಳಿಂದ, ಪೊಲೀಸ್‌ ಕಾನ್ಸ್‌ಟೇಬಲ್‌ (ಸಿವಿಲ್) ಮತ್ತು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ಸಿವಿಲ್) (ಪುರುಷ ಮತ್ತು ಮಹಿಳಾ) ಹಾಗೂ ಸೇವೆಯಲ್ಲಿರುವವರ ಮಿಕ್ಕುಳಿದ ವೃಂದದ ಮತ್ತು ಕಲ್ಯಾಣ-ಕರ್ನಾಟಕ ಪ್ರದೇಶದ ಸ್ಥಳೀಯ ವೃಂದದ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.
ಒಟ್ಟು 100 ಹುದ್ದೆಗಳಿಗೆ ಆನ್‌ಲೈನ್‌ ಮುಖಾಂತರ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.




ಹುದ್ದೆಗಳ ವಿವರ

ಸಿವಿಲ್ ಪೊಲೀಸ್‌ ಕಾನ್ಸ್‌ಟೇಬಲ್‌ 80
ಸಿವಿಲ್ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ 20
  • ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 31-08-2021
  • ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 29-09-2021

  • ಅರ್ಹತೆಗಳು
    ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದ್ವಿತೀಯ ಪಿಯು ಪಾಸ್‌ ಜತೆಗೆ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾಸಾಧನೆ ಮಾಡಿರಬೇಕು. ಅಂದರೆ ಯಾವುದಾದರೂ ಪ್ರಶಸ್ತಿ ಗಳಿಸಿರಬೇಕು. ಅದೇ ರೀತಿ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಪದವಿ ಜತೆಗೆ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾಸಾಧನೆ ಮಾಡಿರಬೇಕು. ಈ ಕುರಿತು ಸಂಪೂರ್ಣ ಅರ್ಹತೆಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವ ನೋಟಿಫಿಕೇಶನ್‌ನಲ್ಲಿ ಚೆಕ್‌ ಮಾಡಬಹುದು.


    ಪೊಲೀಸ್ ಇಲಾಖೆಯು ಈ ಹುದ್ದೆಗಳ ನೇಮಕಾತಿಯನ್ನು ಸಂಪೂರ್ಣ ಪಾರದರ್ಶಕತೆಯಿಂದ ನಡೆಸಲಿದೆ. ಅಭ್ಯರ್ಥಿಗಳು ಇಲಾಖೆಯು ನಿಗಧಿಪಡಿಸಿದ ಶುಲ್ಕವನ್ನು ಮಾತ್ರ ಪಾವತಿಸತಕ್ಕದ್ದು ಎಂದು ಸೂಚಿಸಿದೆ
    ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ಪೊಲೀಸ್ ಇಲಾಖೆ ನೇಮಕ ಪ್ರಕ್ರಿಯೆ ವೆಬ್‌ಸೈಟ್‌ www.recruitment.ksp.gov.in ಗೆ ಭೇಟಿ ನೀಡಲು ಸೂಚಿಸಲಾಗಿದೆ.


Leave a Reply

Your email address will not be published. Required fields are marked *