Song: Kurubaro Naavu Kurubaro
Program Name : Mutthinaarathi – Shishunaala Sharif Saaheb Songs
Singer: C Ashwath
Music Director: C Ashwath
Lyricist: Shishunala Shariff
Music Label : Lahari Music
ರೆರೆ ರೆರೆ ರಾ ಹಾ…
ರೆರೆ ಹೇ ಹೇ ರಾ ಹಾ ಹಾ
ರೆರೆ ರೆರೆ ರಾ ಹಾ ಹಾ…
ರೆರೆ ರೆರೆ ರಿ ರಾ ಹಾ
ಕುರುಬರೋ ನಾವು ಕುರುಬರು
ಏನು ಬಲ್ಲೇವರಿ ಒಳ ಕಾರುಬಾರು
ಕುರುಬರೋ ನಾವು ಕುರುಬರು
ಏನು ಬಲ್ಲೇವರಿ ಒಳ ಕಾರುಬಾರು
ನೂರಾರು ಸೊಕ್ಕಿದ ಕುರಿ ಮೇಯಿಸಿಕೊಂಡು
ಸೆಳೆದಂತೆ ಬಂದೇವು ನಮ್ಮ ಕುರಿ ಹಿಂಡು
ಕುರುಬರೋ ನಾವು ಕುರುಬರು
ಏನು ಬಲ್ಲೇವರಿ ಒಳ ಕಾರುಬಾರು
ಏಳುಸುತ್ತಿನ ಬೇಲಿ ಗುಟ್ಟಾಗಿ ಹಚ್ಚಿ
ಇಟ್ಟೇವ್ರಿ ಕುರಿಗಳ ಚೆನ್ನಾಗಿ ಬಚ್ಚಿ
ಏಳುಸುತ್ತಿನ ಬೇಲಿ ಗುಟ್ಟಾಗಿ ಹಚ್ಚಿ
ಇಟ್ಟೇವ್ರಿ ಕುರಿಗಳ ಚೆನ್ನಾಗಿ ಬಚ್ಚಿ
ಹೊಟ್ಟೆಂಬ ಬಾಗಿಲ ಬಲವಾಗಿ ಮುಚ್ಚಿ
ಹೊಟ್ಟೆಂಬ ಬಾಗಿಲ ಬಲವಾಗಿ ಮುಚ್ಚಿ
ಸಿಟ್ಟೆಂಬ ನಾಯಿಯ ಬಿಟ್ಟೇವ್ರಿ ಬಿಚ್ಚಿ
ಕುರುಬರೋ ನಾವು ಕುರುಬರು
ಏನು ಬಲ್ಲೇವರಿ ಒಳ ಕಾರುಬಾರು
ತನುಯೆಂಬ ದಡ್ಡಿಯ ಹಸನಾಗಿ ಉಡುಗಿ
ತುಂಬಿ ಚಲ್ಲೇವ್ರಿ ಹಿಕ್ಕೇಯ ಹೆಡಗಿ
ತನುಯೆಂಬ ದಡ್ಡಿಯ ಹಸನಾಗಿ ಉಡುಗಿ
ತುಂಬಿ ಚಲ್ಲೇವ್ರಿ ಹಿಕ್ಕೇಯ ಹೆಡಗಿ
ಗುರು ಹೇಳಿದ ಬಾಳು ಹಾಲಿನ ಗಡಗಿ
ಗುರು ಹೇಳಿದ ಬಾಳು ಹಾಲಿನ ಗಡಗಿ
ನಮ್ಮ ಕೈಲೇ ಇದ್ಯೋ ಅರಿವಿನ ಬಡಗಿ
ಕುರುಬರೋ ನಾವು ಕುರುಬರು
ಏನು ಬಲ್ಲೇವರಿ ಒಳ ಕಾರುಬಾರು
ಕುರುಬರೋ ನಾವು ಕುರುಬರು
ಏನು ಬಲ್ಲೇವರಿ ಒಳ ಕಾರುಬಾರು
ಮೇವು ಹುಲ್ಸಾದಂತ ಮಸಣಿದು ಖರೆಯೇ
ಕುರಿ ಇಲ್ಲಿ ಮೆಯ್ಸಾಕ ಬಂದದ್ದು ಸರಿಯೆ
ಮೇವು ಹುಲ್ಸಾದಂತ ಮಸಣಿದು ಖರೆಯೇ
ಕುರಿ ಇಲ್ಲಿ ಮೆಯ್ಸಾಕ ಬಂದದ್ದು ಸರಿಯೆ
ತೋಳ ಹಾರಿ ಕುರಿಗಳ ಗೋಣು ಮುರಿಯೆ
ತೋಳ ಹಾರಿ ಕುರಿಗಳ ಗೋಣು ಮುರಿಯೆ
ನಾಗಲಿಂಗ ಅಜ್ಜ ಹೇಳಿದ ಪರಿಯೇ
ಕುರುಬರೋ ನಾವು ಕುರುಬರು
ಏನು ಬಲ್ಲೇವರಿ ಒಳ ಕಾರುಬಾರು
ಕುರುಬರೋ ನಾವು ಕುರುಬರು
ಏನು ಬಲ್ಲೇವರಿ ಒಳ ಕಾರುಬಾರು
ಕುರುಬರೋ ನಾವು ಕುರುಬರು
ಏನು ಬಲ್ಲೇವರಿ ಒಳ ಕಾರುಬಾರು
Kurubaru naavu Kurubaru Lyrics
Kurubaro navu Kurubaru Lyrics