ಇ-ಶ್ರಮ ಪೋರ್ಟಲ್ ಮೂಲಕ ಸರ್ಕಾರವು 38 ಕೋಟಿ ಅಸಂಘಟಿತ ಕಾರ್ಮಿಕರನ್ನು ಅಂದರೆ ಕಟ್ಟಡ ಕಾರ್ಮಿಕರು, ವಲಸೆ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು ಮತ್ತು ಗೃಹ ಕಾರ್ಮಿಕರನ್ನು ನೋಂದಾಯಿಸುವ ಗುರಿಯನ್ನು ಹೊಂದಿದೆ. ಅಸಂಘಟಿತ ಕಾರ್ಮಿಕರಿಗೆ 12-ಅಂಕಿಯ ವಿಶಿಷ್ಟ ಸಂಖ್ಯೆಯನ್ನು ಹೊಂದಿರುವ ಇ-ಶ್ರಮ ಕಾರ್ಡ್ ಅನ್ನು ನೀಡಲಾಗುತ್ತದೆ.
ಇ – ಶ್ರಮ ಕಾರ್ಡ್ ನ ಉಪಯೋಗಗಳು ಏನು.?
ಅಸಂಘಟಿತ ವಲಯದ ಕಾರ್ಮಿಕರ ಗುರುತಿನ ಚೀಟಿಯು ದೇಶಾದ್ಯಂತ ಸಾಮಾಜಿಕ ಭದ್ರತೆ ಪ್ರಯೋಜನಗಳನ್ನು ಪಡೆಯಲು ಸಹಾಯ ಮಾಡುತ್ತದೆ. ಅಸಂಘಟಿತ ವಲಯದ 38 ಕೋಟಿಗೂ ಹೆಚ್ಚು ಕಾರ್ಮಿಕರಿಗೆ ಅನುಕೂಲವಾಗುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇ-ಶ್ರಮ ಕಾರ್ಡ್ ಅನ್ನು ಬಿಡುಗಡೆ ಮಾಡಿದ್ದಾರೆ.
ಯಾರೆಲ್ಲ ಅರ್ಜಿಯನ್ನು ಸಲ್ಲಸಬಹುದು.?
ಕಟ್ಟಡ ಕಾರ್ಮಿಕರು, ವಲಸೆ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು ಮತ್ತು ಗೃಹ ಕಾರ್ಮಿಕರು.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು.
ನೋಂದಣಿ ಸಮಯದಲ್ಲಿ ಕಾರ್ಮಿಕರ ಆಧಾರ್ ಸಂಖ್ಯೆ, ಜಾತಿ ಪ್ರಮಣಪತ್ರ, ಆದಾಯ ದೃಢೀಕರಣ ಪತ್ರ ಮತ್ತು ಬ್ಯಾಂಕ್ ಖಾತೆ ವಿವರಗಳನ್ನು ಕಾರ್ಡ್ನಲ್ಲಿ ನೀಡಬೇಕು.
ಅರ್ಜಿ ಸಲ್ಲಿಸುವುದು ಹೇಗೆ.?
ಅಧಿಕೃತ ವೆಬ್ ಸೈಟ್ ಆದಂತಹ https://eshram.gov.in/ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.